ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಅತ್ತೆಯನ್ನು ಕೊಲ್ಲಲು ಸೊಸೆ ವೈದ್ಯರ ಬಳಿಯೇ ಮಾತ್ರೆ ಕೇಳಿದ ಘಟನೆಯೊಂದು ನಡೆದಿದೆ. ಡಾಕ್ಟರ್ ಒಬ್ಬರಿಗೆ ನನ್ನ ಅತ್ತೆಯನ್ನು ಸಾಯಿಸಲು ಮಾತ್ರೆ ಬರೆದುಕೊಡಿ ಎಂದು ಕೇಳಿದ್ದು, ಡಾಕ್ಟರ್ ಒಂದು ಕ್ಷಣ ಶಾಕ್ ಆಗಿದ್ದಾರೆ.
ಅತ್ತೆ ಜೊತೆಗಿನ ಜಗಳಕ್ಕೆ ರೋಸಿ ಹೋದ ಸೊಸೆಯೊಬ್ಬರು, ಅವರನ್ನು ಕೊಲ್ಲುವ ಪ್ಲ್ಯಾನ್ ಮಾಡಿದ್ದಾರೆ. ಬಳಿಕ ಡಾಕ್ಟರ್ ಸುನೀಲ್ ಕುಮಾರ್ ಎನ್ನುವವರಿಗೆ ವಾಟ್ಸಾಪ್ನಲ್ಲಿ ಸಂಪರ್ಕಿಸಿದ್ದಾರೆ. ನಮ್ಮ ಅತ್ತೆ ತುಂಬಾ ಹಿಂಸೆ ಕೊಡುತ್ತಿದ್ದಾರೆ. ಅವರಿಗೆ ವಯಸ್ಸಾಗಿದೆ. ಅವರನ್ನು ಹೇಗೆ ಸಾಯಿಸೋದು? ಒಂದೆರೆಡು ಮಾತ್ರೆ ತೆಗೆದುಕೊಂಡರೆ ಸಾಯುತ್ತಾರಲ್ಲ, ಅದನ್ನು ಹೇಳಿ ಎಂದು ಮೆಸೇಜ್ ಮೂಲಕ ಕೇಳಿದ್ದಾರೆ. ಇದನ್ನು ಕೇಳಿ ಶಾಕ್ ಆದ ಡಾಕ್ಟರ್ ಸಂಜಯ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.