SHOCKING NEWS | ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ: ಬಾಲಕಿ ಎರಡು ತಿಂಗಳ ಗರ್ಭಿಣಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಲಬುರಗಿಯಲ್ಲಿ ತಂದೆಯೇ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದು, ಮಗಳು ಎರಡು ತಿಂಗಳ ಗರ್ಭಿಣಿಯಾಗಿದ್ದಾಳೆ.

ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ತಂದೆ ತನ್ನ 13 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದರಿಂದಾಗಿ ಆಕೆ ಗರ್ಭಿಣಿಯಾಗಿದ್ದಾಳೆ. ಇತ್ತೀಚೆಗಷ್ಟೇ ವಾಂತಿಯಿಂದ ಬಳಲುತ್ತಿದ್ದ ಮಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಪಾಸಣೆ ವೇಳೆ ಮಗಳು ಗರ್ಭಿಣಿ ಎನ್ನುವ ವಿಚಾರ ತಿಳಿದುಬಂದಿದೆ. ತನ್ನ ತಂದೆ ಅತ್ಯಾಚಾರ ನಡೆಸಿದ್ದಾರೆ ಎಂದು ಆಕೆ ತಿಳಿಸಿದ್ದಾರೆ. ಅತ್ಯಾಚಾರ ಎಸಗಿದ ತಂದೆ ನಾಪತ್ತೆಯಾಗಿದ್ದು, ಆತನಿಗಾಗಿ ಹುಡುಕಾಟ ಆರಂಭಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!