Saturday, June 25, 2022

Latest Posts

ಮಗಳನ್ನು ಗಂಡನ ಮನೆಗೆ ಕಳುಹಿಸಿ ಇಹಲೋಕ ತ್ಯಜಿಸಿದ ಅಪ್ಪ!

ಹೊಸ ದಿಗಂತ ವರದಿ, ಸೋಮವಾರಪೇಟೆ:

ಮಗಳ ವಿವಾಹ ಮುಗಿಸಿ, ಗಂಡನ ಮನೆಗೆ ಕಾರು ಹತ್ತಿಸಿ ಸಂತೋಷದಿಂದ ಕಳುಹಿಸಿದ ಕೆಲ ಸಮಯದಲ್ಲೇ ತಂದೆ ಹೃದಯಾಘಾತದಿಂದ ಮೃತಪಟ್ಟ ಹೃದಯವಿದ್ರಾವಕ ಘಟನೆ ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದಿದೆ.
ಕಿಬ್ಬೆಟ್ಟ ಗ್ರಾಮದ ಕೃಷಿಕ ಚಿನ್ನಪ್ಪ (60) ಮೃತರು. ಕಲ್ಯಾಣ ಮಂಟಪದಲ್ಲಿ ತಮ್ಮ ದ್ವಿತೀಯ ಪುತ್ರಿಯ ವಿವಾಹ ಸಮಾರಂಭವನ್ನು ಮುಗಿಸಿ ವಧು-ವರರನ್ನು ಗೋಕಾಕ್‍ಗೆ ಕಳುಹಿಸಿದ ನಂತರ ಘಟನೆ ನಡೆದಿದೆ. ತಕ್ಷಣವೇ ಇಲ್ಲಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೃತರು ಪತ್ನಿ ಮತ್ತು ಈರ್ವರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಕಿಬ್ಬೆಟ್ಟ ಗ್ರಾಮದಲ್ಲಿ ನಡೆಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss