October 12, 2026
Monday, October 12, 2026
spot_img

ಮದುವೆ ಮಾಡಿಕೊಡಲ್ಲ ಎಂದಿದ್ದ ತಾಯಿಗೆ ಬೆಂಕಿ ಹಚ್ಚಿದ್ದ ಮಗಳ ಪ್ರೇಮಿ: ಚಿಕಿತ್ಸೆ ಫಲಿಸದೆ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿ ಗೀತಾಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆ ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ಗೀತಾ ಕೊನೆಯುಸಿರೆಳೆದಿದ್ದಾರೆ.

ಗೀತಾ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದು, ಅದೇ ಪ್ರದೇಶದಲ್ಲಿ ಟೀ ಸ್ಟಾಲ್ ಇಟ್ಟುಕೊಂಡಿದ್ದ ಮುತ್ತು ಎಂಬ ಯುವಕನೊಂದಿಗೆ ಸಲುಗೆಯಿಂದಿದ್ದರು. ಒಬ್ಬರಿಗೊಬ್ಬರು ಪರಿಚಯವಾದ ಬಳಿಕ, ಗೀತಾ, ಆಕೆಯ 19 ವರ್ಷದ ಮಗಳು ಹಾಗೂ ಮುತ್ತು ಒಂದೇ ಮನೆಯಲ್ಲಿ ವಾಸವಿದ್ದರು. ಈ ವೇಳೆ ಯುವತಿಯನ್ನು ಮದುವೆ ಮಾಡಿಕೊಡುವಂತೆ ಮುತ್ತು ಗೀತಾಳ ಮೇಲೆ ಒತ್ತಡ ಹೇರುತ್ತಿದ್ದ ಎಂದು ಆರೋಪಿಸಲಾಗಿತ್ತು.

ಆದರೆ ಗೀತಾ ಇದಕ್ಕೆ ಸ್ಪಷ್ಟವಾಗಿ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಘಟನೆ ನಂತರ ಆರೋಪಿ ಪರಾರಿಯಾಗಿದ್ದ. ತೀವ್ರವಾಗಿ ಗಾಯಗೊಂಡ ಗೀತಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇದೀಗ ತಾಯಿಯನ್ನು ಕಳೆದುಕೊಂಡು ಮಗಳ ಆಕ್ರಂದನ ಮುಗಿಲುಮುಟ್ಟಿದೆ.

Must Read