ಮಗಳ ಮದುವೆ: ಉನ್ನಾವೋ ಅತ್ಯಾಚಾರ ಪ್ರಕರಣದ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ ಗೆ ಜಾಮೀನು ಮಂಜೂರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

2017ರ ಉನ್ನಾವೋ ಅತ್ಯಾಚಾರ ಪ್ರಕರಣ(Unnao rape case)ದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕುಲದೀಪ್ ಸಿಂಗ್ ಸೆಂಗಾರ್ (Kuldeep Sengar ) ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಮಗಳ ಮದುವೆಗೆ ಹಿನ್ನೆಲೆ ಮಧ್ಯಂತರ ಜಾಮೀನು(interim bail )ಕೋರಿ ಸೆಂಗರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದೀಗ ನ್ಯಾಯಮೂರ್ತಿಗಳಾದ ಮುಕ್ತಾ ಗುಪ್ತಾ ಮತ್ತು ಪೂನಂ ಎ ಬಂಬಾ ಅವರ ಪೀಠವು ಜನವರಿ 27 ರಿಂದ ಫೆಬ್ರವರಿ 10 ರವರೆಗೆ ಕುಲದೀಪ್ ಸೆಂಗಾರ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿದೆ. ಪ್ರತಿದಿನವೂ ಸಂಬಂಧಿತ ಎಸ್‌ಎಚ್‌ಒಗೆ ವರದಿ ಮಾಡಲು ಮತ್ತು ತಲಾ 1 ಲಕ್ಷ ರೂಪಾಯಿಗಳ ಎರಡು ಶ್ಯೂರಿಟಿಗಳನ್ನು ಒದಗಿಸುವಂತೆ ತಿಳಿಸಿದೆ.

ಫೆಬ್ರವರಿ 8 ರಂದು ಮದುವೆ ನಡೆಯಲಿದೆ ಎಂದು ನ್ಯಾಯಾಲಯಕ್ಕೆ ಈ ಹಿಂದೆ ತಿಳಿಸಿದ್ದರು.

2017ರಲ್ಲಿ ಉತ್ತರ ಪ್ರದೇಶದ ಉನ್ನಾವೊದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಉಚ್ಛಾಟಿತ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!