ಇಂದಿರಾಗಾಂಧಿ ವಸತಿ ಶಾಲೆಯ 50 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:
ಊಟ ಮಾಡಿ ಮಲಗಿದ ಮಕ್ಕಳು ಬೆಳಗ್ಗೆ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದಲ್ಲಿ ನಡೆದಿದೆ.
ಇಂದಿರಾಗಾಂಧಿ ವಸತಿ ಶಾಲೆಯ ಸುಮಾರು 50 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಹೊನ್ನಾಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಶಾಸಕ ರೇಣುಕಾಚಾರ್ಯ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಸ್ವಸ್ಥರಾದ ಮಕ್ಕಳ ಆರೋಗ್ಯದ ಬಗ್ಗೆ ವಿಚಾರಿಸಿ, ಮಕ್ಕಳ ಬಗ್ಗೆ ಕಾಳಜಿ ವಹಿಸುವಂತೆ ಆರೋಗ್ಯ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!