ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಭಾರೀ ಸ್ಫೋಟಕ್ಕೆ ತಯಾರಿ ನಡೆಸಿದ್ದ ಐವರು ಶಂಕಿತ ಉಗ್ರರು ಸಿಸಿಬಿ ಬಲೆಗೆ ಬಿದ್ದಿದ್ದು, ತೀವ್ರ ವಿಚಾರಣೆ ನಡೆಯುತ್ತಿದೆ.
ಬೆಂಗಳೂರಿನಲ್ಲಿ ಸ್ಫೋಟಕ್ಕೆ ಸ್ಕೆಚ್ ಹಾಕಿದ್ದ ಈ ಉಗ್ರರಿಗೆ ದಾವಣಗೆರೆಯಲ್ಲಿಯೂ ನಂಟಿದೆ. ಸದ್ಯ ಸಿಸಿಬಿ ಪೊಲೀಸರು ದಾವಣಗೆರೆಯಲ್ಲಿ ಮತ್ತೋರ್ವನನ್ನು ವಶಕ್ಕೆ ಪಡೆದಿದ್ದಾರೆ. ಈತ ಬೆಂಗಳೂರಿನಲ್ಲಿ ಅರೆಸ್ಟ್ ಆದ ಶಂಕಿತ ಉಗ್ರರ ಜೊತೆ ಸಂಪರ್ಕದಲ್ಲಿದ್ದ.
ದಾವಣಗೆರೆಯ ಆಜಾದ್ ನಗರದಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದ ಫಯಾಜ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.