Thursday, August 11, 2022

Latest Posts

ದಾವಣಗೆರೆ| ಹರಿಹರ ತಾಲೂಕಿನ ಆಕ್ಸಿಜನ್ ಪ್ಲಾಂಟ್‌ಗೆ ಶಾಸಕ ಟಿ.ರಘುಮೂರ್ತಿ ಭೇಟಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ, ಚಿತ್ರದುರ್ಗ:

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಆಕ್ಸಿಜನ್ ಪ್ಲಾಂಟ್‌ಗೆ ಭೇಟಿ ನೀಡಿದರು. ಚಿತ್ರದುರ್ಗ ಜಿಲ್ಲೆಗೆ ಅಗತ್ಯವಿರುವ ಆಕ್ಸಿಜನ್ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಕುರಿತು ಅಲ್ಲಿನ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ರಾಜ್ಯದಾದ್ಯಂತ ಜನರನ್ನು ಕಾಡುತ್ತಿರುವ ಕೊರೋನಾ ಸಾಂಕ್ರಾಮಿಕ ರೋಗಕ್ಕೆ ಇಡೀ ಕರ್ನಾಟಕವೇ ನಲುಗಿ ಹೋಗಿದೆ. ಇದರ ಮಧ್ಯೆ ಆಕ್ಸಿಜನ್ ಅಭಾವದಿಂದ ಸೋಂಕಿತರು ಸಾವನಪ್ಪುತ್ತಿದ್ದಾರೆ. ಈ ನಿಟ್ಟಿನಲ್ಲಿ ರೋಗಿಗಳ ಪ್ರಾಣ ಉಳಿಸುವ ನಿಟ್ಟಿನಲ್ಲಿ ಪ್ರಾಣವಾಯು ಆಕ್ಸಿಜನ್ ಪೂರೈಸುವ ಕುರಿತು ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.
ಚಿತ್ರದುರ್ಗ ಜಿಲ್ಲೆಗೆ ಅಗತ್ಯವಿರುವ ಪ್ರಮಾಣಕ್ಕಿಂತ ಕಡಿಮೆ ಪ್ರಮಾಣದಲ್ಲಿ ಆಕ್ಸಿಜನ್ ಪುರೈಕೆಯಾಗುತ್ತಿದೆ. ಹಾಗಾಗಿ ಉಸಿರಾಟದ ತೊಂದರೆಯಿಂದ ಅನೇಕ ಜನರು ಅಸುನೀಗುತ್ತಿದ್ದಾರೆ. ಇದರಿಂದ ಕುಟುಂಬಕ್ಕೆ ಆಧಾರವಾದ ವ್ಯಕ್ತಿಯನ್ನು ಕಳೆದುಕೊಂಡ ಅನೇಕ ಕುಟುಂಬಗಳು ಬೀದಿಗೆ ಬೀಳುವಂತಾಗಿದೆ. ಕೋವಿಡ್ ಸೋಂಕಿತರ ಆರೋಗ್ಯದ ಹಿತದೃಷ್ಟಿಯಿಂದ ಅಗತ್ಯಕ್ಕೆ ತಕ್ಕಂತೆ ಆಕ್ಸಿಜನ್ ಅನ್ನು ಸಕಾಲದಲ್ಲಿ ಪೂರೈಸುವಂತೆ ಮನವಿ ಮಾಡಿದರು.
ಈಗಾಗಲೇ ಚಳ್ಳಕೆರೆಗೆ ಅಗತ್ಯಕ್ಕನುಗುಣವಾಗಿ ಆಕ್ಸಿಜನ್ ಪೂರೈಸಲಾಗುತ್ತಿದೆ. ಇಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಾಧ್ಯವಾದಷ್ಟು ಪ್ರಮಾಣದಲ್ಲಿ ಆಕ್ಸಿಜನ್ ಪೂರೈಸುವುದಾಗಿ ಪ್ಲಾಂಟ್‌ನ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಚಳ್ಳಕೆರೆ ಆಸ್ಪತ್ರೆಯಲ್ಲಿ ಹಾಲಿ 18 ಆಕ್ಸಿಜನ್‌ನೇಟೆಡ್ ಬೆಡ್‌ಗಳಿವೆ. ಅವನ್ನು ೫೦ ಸಾಧ್ಯವಾದಲ್ಲಿ 100 ಬೆಡ್‌ಗಳಿಗೆ ಹೆಚ್ಚು ಮಾಡುವ ಉದ್ದೇಶವಿದೆ. ಹಾಗಾಗಿ ಸಾಧ್ಯವಾದಷ್ಟು ಆಕ್ಸಿಜನ್ ನೀಡಿ ಸಹಕರಿಸಬೇಕೆಂದು ದಾವಣಗೆರೆ ಜಿಲ್ಲಾಧಿಕಾರಿ ಮಹಂತೇಶ್ ಬೀಳಗಿ ಅವರ ಜೊತೆ ಶಾಸಕ ಟಿ.ರಘುಮೂರ್ತಿ ಮಾತುಕತೆ ನಡೆಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss