JOB| ದಾವಣಗೆರೆ ಜಿಲ್ಲಾ ಪಂಚಾಯಿತಿಯಲ್ಲಿ 20 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದಾವಣಗೆರೆ ಜಿಲ್ಲಾ ಪಂಚಾಯಿತಿಯಲ್ಲಿ 20 ತಾಂತ್ರಿಕ ಸಹಾಯಕ ಮತ್ತು ಆಡಳಿತ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬಿ.ಇ, ಬಿ.ಎಸ್ಸಿ, ಬಿ.ಕಾಂ ವಿದ್ಯಾರ್ಹತೆ ಜೊತೆಗೆ ಆಗಸ್ಟ್‌ 1,2023ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/-ರಿಂದ 28,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಆಗಸ್ಟ್‌ 24,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!