April 9, 2026
Thursday, April 9, 2026
spot_img

ದಾವಣಗೆರೆ-ಬಾಗಲಕೋಟೆ ಉಪಚುನಾವಣೆ: ಇಂದು ಮತದಾನ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದ್ದು, ಮತದಾನ ಆರಂಭವಾಗಿದೆ.

ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಹಾಗೂ ಎಚ್‌.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಮತ್ತು ಬಿಜೆಪಿಯಿಂದ ಶ್ರೀನಿವಾಸ್ ಟಿ. ದಾಸಕರಿಯಪ್ಪ ಸೇರಿದಂತೆ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಕಾಂಗ್ರೆಸ್‌ನ ಉಮೇಶ್ ಮೇಟಿ ಮತ್ತು ಬಿಜೆಪಿಯ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 20 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ ನಡೆಯುತ್ತಿದೆ.

ಚುನಾವಣಾ ಕರ್ತವ್ಯಕ್ಕಾಗಿ 1,430ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೃದಯಾಘಾತ ಮತ್ತು ಬಿಪಿ ಸಮಸ್ಯೆ ಇರುವ ಸಿಬ್ಬಂದಿಗಾಗಿ ಪ್ರತಿ ಕೇಂದ್ರದಲ್ಲೂ ಹೆಲ್ತ್ ಚೆಕಪ್ ವ್ಯವಸ್ಥೆ ಮಾಡಲಾಗಿದೆ ಎರಡೂ ಕ್ಷೇತ್ರಗಳಾದ್ಯಂತ ವ್ಯಾಪಕ ಬಂದೋಬಸ್ತ್ ನಡುವೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !