April 30, 2026
Thursday, April 30, 2026
spot_img

‘ಕೈ’ಗೆ ನಾಯಕರಿಗೆ ತಲೆನೋವು ತಂದಿಟ್ಟ ದಾವಣಗೆರೆ ಬೈ ಎಲೆಕ್ಷನ್: ರಾಜೀನಾಮೆ ಬಾಂಬ್ ಸಿಡಿಸಿದ ಸಚಿವ ಜಮೀರ್‌?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಗೆ ದೊಡ್ಡ ತಲೆನೋವುವಾಗಿ ಪರಿಣಮಿಸಿದೆ .

ಅದರಲ್ಲೂ ದಾವಣಗೆರೆ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ಜಟಾಪಟಿ ಜೋರಾಗುತ್ತಿದ್ದು, ಸಚಿವ ಜಮೀರ್‌ ಅಹ್ಮದ್ ತಮ್ಮ ಸಮುದಾಯಕ್ಕೇ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದು, ಇಲ್ಲವಾದಲ್ಲಿ ರಾಜೀನಾಮೆ ಬಾಂಬ್ ಸಿಡಿಸಿದ್ದಾರೆ.

ಅಭ್ಯರ್ಥಿ ಆಯ್ಕೆ ವಿಚಾರ ಕಾಂಗ್ರೆಸ್ ಸತತ ಸಭೆ ನಡೆಸುತ್ತಿದ್ದು, ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಕೂಡ ರಾಜ್ಯದಲ್ಲೇ ಬೀಡುಬಿಟ್ಟಿದ್ದಾರೆ. ಒಂದೆಡೆ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಮುಸ್ಲಿಮ್ ನಾಯಕರಿಗೆ ನೀಡಬೇಕು ಎಂದು ಜಮೀರ್ ಪಟ್ಟು ಹಿಡಿದಿದ್ದರೆ, ಮತ್ತೊಂದೆಡೆ ಬಿ ಫಾರಂ ಇಲ್ಲದೆಯೇ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ ಈಗಾಗಲೇ ನಾಪತ್ರ ಸಲ್ಲಿಕೆ ಮಾಡಿದ್ದಾರೆ. ಇದು ಕಾಂಗ್ರೆಸ್ ನಲ್ಲಿ ಅಸಮಾಧಾನ ಹೆಚ್ಚಿಸಿದೆ.

ಅಂತಿಮವಾಗಿ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಒಳಗೆ ಯಾರು ಅಭ್ಯರ್ಥಿ ಎಂದು ಘೋಷಣೆ ಮಾಡುತ್ತೇವೆ ಎಂದು ಸುರ್ಜೆವಾಲ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !