spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಾವಣಗೆರೆ| ಇಬ್ಬರು ರೈತರಿಗೆ ಸಿಡಿಲು ಬಡಿದು ಸ್ಥಳದಲ್ಲೇ ಸಾವು

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………

ಹೊಸ ದಿಗಂತ ವರದಿ, ದಾವಣಗೆರೆ:

ಜಮೀನಿನಲ್ಲಿ ಒಕ್ಕಲುತನ ಮಾಡುತ್ತಿದ್ದ ಇಬ್ಬರು ರೈತರಿಗೆ ಸಿಡಿಲು ಬಡಿದು ಸ್ಥಳದಲ್ಲೇ ದುರಂತ ಸಾವು ಕಂಡ ಘಟನೆ ತಾಲೂಕಿನ ಮಾಯಕೊಂಡ ಸಮೀಪದ ಹುಚ್ಚವ್ವನಹಳ್ಳಿಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.
ತಾಲೂಕಿನ ಹುಚ್ಚವ್ವನಹಳ್ಳಿ-ವಡ್ಡರಹಟ್ಟಿ ಗ್ರಾಮದ ರವಿಕುಮಾರ(32 ವರ್ಷ), ರಮೇಶ(30 ವರ್ಷ) ಸಿಡಿಲಿಗೆ ಬಲಿಯಾದ ರೈತರು. ಗ್ರಾಮದ ಗುಡ್ಡದ ಜಮೀನಿನಲ್ಲಿ ಮುಂಗಾರು ಬಿತ್ತನೆಗಾಗಿ ಕಲ್ಲುಗಳನ್ನು ಆರಿಸಿ, ಹೊಲವನ್ನು ಸ್ವಚ್ಛಗೊಳಿಸುತ್ತಿದ್ದ ವೇಳೆ
ಸಿಡಿಲು ಬಡಿದು ಇಬ್ಬರೂ ಸ್ಥಳದಲ್ಲೇ ಅಸುನೀಗಿದ್ದಾರೆ.
ಸಿಡಿಲಿಗೆ ಬಲಿಯಾದ ರೈತರಾದ ರವಿಕುಮಾರ್‌ಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ರಮೇಶ್‌ಗೆ ಒಂದು ಮಗುವಿದೆ. ಮಾಯಕೊಂಡ ಆಸ್ಪತ್ರೆಯ ಶವಾಗಾರದ ಎದುರು ಮೃತರ ಕುಟುಂಬ ವರ್ಗದ ರೋಧನ ಮುಗಿಲು ಮುಟ್ಟುವಂತಿತ್ತು. ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ
ದಾಖಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss