April 10, 2026
Friday, April 10, 2026
spot_img

ದಾವಣಗೆರೆ: ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಸಿಕ್ಕಿದೆ ಅವಕಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಿಗೆ ಮನೆಯಿಂದಲೇ ಮತ ಚಲಾಯಿಸಲು ವಿಶೇಷ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ. ಜಿ.ಎಂ. ಗಂಗಾಧರ ಸ್ವಾಮಿ ಅವರು ತಿಳಿಸಿದ್ದಾರೆ.

ಕ್ಷೇತ್ರದಲ್ಲಿ ಒಟ್ಟು 2,066 ಮಂದಿ 85 ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರಿದ್ದು, ಇವರು ಅಂಚೆ ಮತಪತ್ರದ ಮೂಲಕ ತಮ್ಮ ಮನೆಯಿಂದಲೇ ಮತದಾನ ಮಾಡಬಹುದಾಗಿದೆ. ಇದೇ ಸೌಲಭ್ಯವು ಕ್ಷೇತ್ರದಲ್ಲಿ ಗುರುತಿಸಲಾದ ಒಟ್ಟು 2,518 ವಿಶೇಷ ಚೇತನ ಮತದಾರರಿಗೂ ಅನ್ವಯಿಸಲಿದೆ ಎಂದು ಅವರು ವಿವರಿಸಿದ್ದಾರೆ.


ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆಯ ವಿವರ ನೀಡಿದ ಅವರು, ಒಟ್ಟು 2,31,683 ಮತದಾರರ ಪೈಕಿ 1,17,986 ಮಹಿಳೆಯರು ಹಾಗೂ 1,13,654 ಪುರುಷ ಮತದಾರರಿದ್ದಾರೆ. ವಿಶೇಷವೆಂದರೆ, ಈ ಕ್ಷೇತ್ರದಲ್ಲಿ ಪುರುಷರಿಗಿಂತ 4,332 ಕ್ಕೂ ಹೆಚ್ಚು ಮಹಿಳಾ ಮತದಾರರು ಇದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸುಗಮ ಮತ್ತು ಪಾರದರ್ಶಕ ಮತದಾನಕ್ಕಾಗಿ ಜಿಲ್ಲಾಡಳಿತವು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಅವರು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !