March 30, 2026
Monday, March 30, 2026
spot_img

ದಾವಣಗೆರೆ ದಕ್ಷಿಣ, ಬಾಗಲಕೋಟೆ ಚುನಾವಣಾ ಅಕ್ರಮ ವಿರುದ್ಧ ಆಯೋಗದ ಹದ್ದಿನ ಕಣ್ಣು: ಇದುವರೆಗೆ 53 ಎಫ್‌ಐಆರ್ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:


ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮ ನಡೆಯದಂತೆ ಚುನಾವಣಾ ಆಯೋಗವು ಹದ್ದಿನ ಕಣ್ಣಿಟ್ಟಿದೆ.


ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮತದಾರರಿಗೆ ಆಮಿಷ ಒಡ್ಡುವುದು ಸೇರಿದಂತೆ ಯಾವುದೇ ಅಕ್ರಮಗಳು ನಡೆಯದಂತೆ ತಡೆಯಲು ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ. ಈವರೆಗೆ ನಡೆಸಿರುವ ವಿವಿಧ ಕಾರ್ಯಾಚರಣೆಗಳಲ್ಲಿ ನಿಯಮ ಬಾಹಿರವಾಗಿ ಸಾಗಿಸುತ್ತಿದ್ದ ಹಣ ಹಾಗೂ ಮದ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, ಒಟ್ಟು 53 ಎಫ್‌ಐಆರ್ ದಾಖಲಿಸಲಾಗಿದೆ. ಅಲ್ಲದೆ, ಅಕ್ರಮಕ್ಕೆ ಬಳಸಲಾದ 14 ವಾಹನಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !