ದಾವಣಗೆರೆ | ಸಾಲಬಾಧೆಗೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಯುವ ರೈತ

ಹೊಸದಿಗಂತ ದಾವಣಗೆರೆ:

ಸಾಲಬಾಧೆಯಿಂದ ಬೇಸತ್ತು ಯುವ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹರಿಹರ ತಾಲ್ಲೂಕು ಕಡರನಾಯ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕೆ.ಹೆಚ್.ಕಾಶಿನಾಥ್(38 ವರ್ಷ) ಆತ್ಮಹತ್ಯೆ ಮಾಡಿಕೊಂಡ ಯುವ ರೈತ. ಇವರು ಕಡರನಾಯ್ಕನಹಳ್ಳಿಯ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2 ಲಕ್ಷ ರೂ. ಸಾಲ ಪಡೆದಿದ್ದರು. ತಮ್ಮ ಎರಡು ಎಕರೆ ಜಮೀನಿನಲ್ಲಿ ಭತ್ತ ಬೆಳೆದಿದ್ದರು. ಈ ಬಾರಿ ಇಳುವರಿ ಕಡಿಮೆಯಾಗುವ ಜೊತೆಗೆ ಮಾರುಕಟ್ಟೆಯಲ್ಲಿ ಭತ್ತದ ದರ ಕೂಡ ಕುಸಿದಿದ್ದರಿಂದಾಗಿ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!