ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಡೇವಿಡ್ ವಾರ್ನರ್ ವಿದಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಸೂಪರ್-8 ಸುತ್ತಿನ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ದ ಆಸ್ಟ್ರೇಲಿಯಾ 24 ರನ್​ಗಳಿಂದ ಸೋಲನುಭವಿಸಿತ್ತು. ಈ ಸೋಲಿನೊಂದಿಗೆ ವಾರ್ನರ್ ತಮ್ಮ ಟಿ20 ಕೆರಿಯರ್ ಅಂತ್ಯಗೊಳಿಸಿದ್ದಾರೆ.

ಈ ಬಾರಿಯ ಟಿ20 ವಿಶ್ವಕಪ್​ಗೂ ಮುನ್ನ ಡೇವಿಡ್ ವಾರ್ನರ್ ನಿವೃತ್ತಿಯ ಸೂಚನೆ ನೀಡಿದ್ದರು. ಅಲ್ಲದೆ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಚುಟುಕು ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದರು. ಆದರೆ ಟಿ20 ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ ಆಸ್ಟ್ರೇಲಿಯಾ ತಂಡದ ಲೆಕ್ಕಾಚಾರಗಳು ತಲೆಕೆಳಗಾಗಿದೆ. ಹೀಗಾಗಿ ಡೇವಿಡ್ ವಾರ್ನರ್ ನೋವಿನ ವಿದಾಯ ಹೇಳುವಂತಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!