Thursday, August 11, 2022

Latest Posts

ಟಾಲಿವುಡ್ ನಲ್ಲಿ ಡ್ರಗ್ಸ್ ಸದ್ದು: ಇಡಿ ವಿಚಾರಣೆಗೆ ಹಾಜರಾದ ನಟ ರವಿತೇಜ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಟಾಲಿವುಡ್ ನ ಸ್ಟಾರ್ ನಟ-ನಟಿಯರ ಹೆಸರು ಡ್ರಗ್ಸ್ ಪ್ರಕರಣದಲ್ಲಿ ಕೇಳಿಬಂದಿದ್ದು, ಇದೀಗ ಸ್ಟಾರ್ ನಟ ರವಿತೇಜ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಹಾಜರಾಗಿದ್ದಾರೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟೀಸ್ ನೀಡಿದ್ದ ಹಿನ್ನೆಲೆಯಲ್ಲಿ ನಟ ರವಿತೇಜ ಇಂದು ಇಡಿ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದು, ಈ ವೇಳೆ ಬ್ಯಾಂಕ್ ವ್ಯವಹಾರಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಟಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ರಾಣಾ, ನಿರ್ದೇಶಕ ಪುರಿ ಜಗನ್ನಾಥ್, ನಟಿಯರಾದ ಚಾರ್ಮಿ ಕೌರ್, ರಾಕುಲ್ ಪ್ರೀತ್ ಸಿಂಗ್, ಮುಮೈತ್ ಖಾನ್ ಸೇರಿದಂತೆ ಹಲವು ಸ್ಟಾರ್ ನಟ ನಟಿಯರು ಇಡಿ ವಿಚಾರಣೆ ಎದುರಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss