ಹೊಸದಿಗಂತ ಡಿಜಿಟಲ್ ಡೆಸ್ಕ್:
24ಗಂಟೆ ಕಳೆಯುವಷ್ಟರಲ್ಲಿ ನೇಪಾಳದಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲಾಗಿದೆ. ಭಾನುವಾರ ಮುಂಜಾನೆ 4.38ಕ್ಕೆ ಕಂಪನದ ಅನುಭವವಾಗಿದ್ದು, ಕಠ್ಮಂಡುವಿನಿಂದ 169 ಕಿ.ಮೀ ದೂರದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ.
ಈಗಾಗಲೇ ಶನಿವಾರ ನಡುರಾತ್ರಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ 157 ಜನರನ್ನು ಬಲಿಯಾದ ನಂತರವೂ ಮತ್ತೆ ಮತ್ತೆ ಸಂಭವಿಸುತ್ತಿರುವ ಭೂಕಂಪನಳು ಜನರ ನಿದೆಗೆಡಿಸಿವೆ. ಶನಿವಾರ ಸಂಭವಿಸಿದ ಭಾರೀ ಭೂಕಂಪದಿಂದ ಜೀವಹಾನಿ ಮತ್ತು ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ನೇಪಾಳದ ಪ್ರಧಾನಿ ಪುಷ್ಪ ಕಮಾಲ್ ಹೇಳಿದ್ದಾರೆ.
ಹೆಲಿಕಾಪ್ಟರ್‌ಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲು ನೇಪಾಳ ಸೇನೆ, ನೇಪಾಳಿ ಸೆಂಟಿನೆಲ್ ಮತ್ತು ಸಶಸ್ತ್ರ ಪೊಲೀಸ್ ಪಡೆಗಳನ್ನು ಸರ್ಕಾರ ನಿಯೋಜಿಸಿದೆ. ಗಾಯಾಳುಗಳನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ನೆರವು ನೀಡಲಾಗಿದೆ. ನೇಪಾಳದಲ್ಲಿ ಸಿಲುಕಿರುವ ಭಾರತೀಯ ನಾಗರೀಕರಿಗೆ ಭಾರತವು ಸಹಾಯವಾಣಿ ಸಂಖ್ಯೆಯನ್ನು ಸ್ಥಾಪಿಸಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ನೇಪಾಳದಲ್ಲಿ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ಅಪಾರ ಹಾನಿಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಎಲ್ಲಾ ರೀತಿಯ ಸಹಾಯಕ್ಕೂ ಸಿದ್ಧ ಎಂಬ ಮಾತನ್ನೂ ಹೇಳಿದರು.