ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………
ಹೊಸ ದಿಗಂತ ವರದಿ, ಯಾದಗಿರಿ :
ಯಾದಗಿರಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 55 ಆಕ್ಸಿಜನ್ ಬೆಡ್ಗಳನ್ನು ವ್ಯವಸ್ಥೆ ಮಾಡಲಾಗುತ್ತಿದ್ದು, ಇಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾ ನಿರ್ಮಿತಿ ಕೇಂದ್ರದಿoದ ಈ ಆಕ್ಸಿಜನ್ ಬೆಡ್ಗಳ ಜೋಡಣೆ ಕಾರ್ಯ ನಡೆಯುತ್ತಿದ್ದು, 55 ಹೆಚ್ಚುವರಿ ಅಕ್ಸಿಜನ್ ಬೆಡ್ಗಳ ಪೈಕಿ ಈಗಾಗಲೇ 30 ಬೆಡ್ಗಳ ಜೋಡಣೆ ಕಾರ್ಯ ಮುಗಿದಿದೆ. ಉಳಿದ 25 ಅಕ್ಸಿಜನ್ ಬೆಡ್ಗಳನ್ನೂ ಅದಷ್ಟು ಶೀಘ್ರ ವ್ಯವಸ್ಥೆಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಕಿರಣ್ ಕುಮಾರ್ ಹೂಗಾರ್ ಮಾತನಾಡಿ, 2-3 ದಿನಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ರೋಗಿಗಳ ಸೇವೆಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡುವ ಸ್ಥಳ ( ವಾರ್ಡ್)ವನ್ನು ಸ್ಯಾನಿಟೈನ್ ಮಾಡಿ ನಿರ್ಮಿತಿ ಕೇಂದ್ರದವರು ಕಾಮಗಾರಿ ಕೈಗೊಳ್ಳಲು ಅನುವು ಮಾಡಿಕೊಡಬೇಕು ಎಂದು ಸ್ಥಾನಿಕ ವೈದ್ಯಾಧಿಕಾರಿ ( ಆರ್ಎಂಓ) ಡಾ. ನೀಲಮ್ಮ ಅವರಿಗೆ ಸೂಚಿಸಿದರು.
ಜಿಲ್ಲಾ ಕೋವಿಡ್ ಆಸ್ಪತ್ರೆ ಈಗಾಗಲೇ 132 ಆಕ್ಸಿಜನ್ ಬೆಡ್ಗಳ ಸಾಮರ್ಥ್ಯವನ್ನು ಹೊಂದಿದ್ದು, ಇದೀಗ ಹೆಚ್ಚುವರಿ 55 ಬೆಡ್ಗಳ ಸೇರ್ಪಡೆಯಿಂದ 187ಕ್ಕೇರಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ರಾಗಪ್ರಿಯಾ ಆರ್. ಅವರು ತಿಳಿಸಿದರು.