Thursday, February 25, 2021

Latest Posts

ಭತ್ತ, ರಾಗಿ ಖರೀದಿಯಲ್ಲಿ ರೈತರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಿ: ಮಂಡ್ಯ ಡಿಸಿ ಸೂಚನೆ

ಹೊಸದಿಗಂತ ವರದಿ, ಮಂಡ್ಯ:

ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸಿರುವ ಭತ್ತ,ರಾಗಿ ದಾಸ್ತಾನುಗಳ ತಪಾಸಣೆ ಮಾಡಿ ಹಾಗೂ ಖರೀದಿ ಪ್ರಕ್ರಿಯೆ ಸಂಬಂಧ ರೈತರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿಗಳಾದ ಎಸ್.ಅಶ್ವಥಿಯವರು ಹೇಳಿದರು.

ಇಂದು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಆಹಾರ ಧಾನ್ಯಗಳ ಖರೀದಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು 2020-21ನೇ ಸಾಲಿಗೆ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ,ರಾಗಿ ಖರೀದಿಗೆ ಸಂಬಂಧಿಸಿದ ಎಲ್ಲಾ ಕುಂದುಕೊರತೆಗಳನ್ನು ನಿವಾರಿಸಿ ಎಂದರು.
ಭತ್ತ,ರಾಗಿ ಖರೀದಿ ಸಂಬಂಧ ಖರೀದಿ ಕೇಂದ್ರಗಳಲ್ಲಿ, ನೊಂದಣಿ ಮಾಡಿಕೊಂಡಿರುವ ರೈತರ ಭತ್ತ, ರಾಗಿ ಖರೀದಿ ಪ್ರಕ್ರಿಯೆ ಕ್ಷಿಪ್ರಗತಿಯಲ್ಲಿ ಸಾಗಬೇಕು ಎಂದರು.

ಈಗಾಗಲೇ ಭತ್ತ,ರಾಗಿ ಖರೀದಿ ಪ್ರಕ್ರಿಯೆ ನಡೆಯುತ್ತಿದೆ ಆದರೆ, ರೈತರು ಇದರ ಸದುಪಯೋಗಪಡಿಸಿಕೊಳ್ಳಲು ಭಿತ್ತಿಪತ್ರಗಳ ಮೂಲಕ ಹೆಚ್ಚು ಪ್ರಚುರಪಡಿಸಿ. ಖರೀದಿ ಕೇಂದ್ರಗಳಲ್ಲಿ ನಿಗದಿತ ಸಮಯದಲ್ಲಿ ಸಿಬ್ಬಂದಿಗಳು ಹಾಜರಾಗಲು ಕ್ರಮವಹಿಸಿ, ಅವಶ್ಯಕವಿರುವ ಕಡೆ ಹೆಚ್ಚಿನ ಖರೀದಿ ಕೇಂದ್ರಗಳಿಗೆ ಅವಕಾಶ ಕಲ್ಪಿಸಿ ಎಂದರು.

ಭತ್ತ,ರಾಗಿ ಖರೀದಿ ಸಂಬಂಧ ಸೀನಿಯಾರಿಟಿ ಆಧಾರದ ಮೇಲೆ ಖರೀದಿಸಿ, ದಲ್ಲಾಳಿಗಳಿಗೆ ಅವಕಾಶ ಮಾಡಿಕೊಡಬೇಡಿ, ಈ ಸಂಬಂಧ ಅಧಿಕಾರಿಗಳು ಕ್ರಮಕೈಗೊಳ್ಳಿ ಎಂದರು.

ಈಗಾಗಲೇ ಭತ್ತ ಖರೀದಿ ಸಂಬಂಧ ಒಟ್ಟು 31 ನೊಂದಾವಣಿ ಕೇಂದ್ರಗಳನ್ನು ತೆರೆದಿದ್ದು, ಈ ಕೇಂದ್ರಗಳಲ್ಲಿ ಕಂಡು ಬಂದಿರುವ ಸಿಬ್ಬಂದಿ ಕೊರತೆಗಳನ್ನು ನಿವಾರಿಸಿ ಎಂದು ಹೇಳಿದರು. ಭತ್ತ,ರಾಗಿ ಸಂಬಂಧ ಉತ್ತಮ ಗುಣಮಟ್ಟವನ್ನು ಪರಿಶೀಲನೆ ಮಾಡಿ ಖರೀದಿಸಿ ಎಂದರು.

ಭತ್ತ,ರಾಗಿ ಖರೀದಿ ಮಾಡಿರುವ ರೈತರಿಗೆ ಹಣ ಸಂದಾಯ ಮಾಡಲು ಕ್ರಮ ಕೈಗೊಳ್ಳಿ ಎಂದು ಮಾರ್ಕೆಂಟಿಗ್ ಫೆಡರೇಶನ್ ಅಧಿಕಾರಿಗಳಿಗೆ ಸೂಚಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!