RECRUITMENT | ಜಿಲ್ಲಾಧಿಕಾರಿಗಳ ಕಾರ್ಯಾಲಯ ಬೆಂಗಳೂರು ನಗರದಲ್ಲಿ 105 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಜಿಲ್ಲಾಧಿಕಾರಿಗಳ ಕಾರ್ಯಾಲಯ ಬೆಂಗಳೂರು ನಗರದಲ್ಲಿ 105 ಲೋಡರ್‌ ಮತ್ತು ಕ್ಲೀನರ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಲೋಡರ್‌ ಮತ್ತು ಕ್ಲೀನರ್‌ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ಕನಿಷ್ಟ 18 ರಿಂದ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 28,950/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಫೆಬ್ರವರಿ 8,2023 ರಿಂದ ಮಾರ್ಚ್‌ 15,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!