ಬೆಳ್ಳಂ ಬೆಳಗ್ಗೆ ರೋಡಿಗಿಳಿದ ಡಿಸಿ, ಎಸ್ಪಿ: ಟ್ರಾಫಿಕ್‌ ಸಮಸ್ಯೆಗೆ ಕಡಿವಾಣ ಹಾಕಲು ಕ್ರಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬುಧವಾರ ಬೆಳಿಗ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಮತ್ತು ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರರವರ ನೇತೃತ್ವದಲ್ಲಿ ನಗರದ ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಕಲ್ಸಂಕ ಜಂಕ್ಷನ್ ಗೆ ಭೇಟಿ ನೀಡಿ ಟ್ರಾಫಿಕ್ ಸಮಸ್ಯೆಯನ್ನು ಕೂಲಂಕಷವಾಗಿ ಗಮನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ನಗರದಲ್ಲಿ ಟ್ರಾಫಿಕ್ ಒತ್ತಡದಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳಬೇಕೆಂದು ಇಂಜಿನಿಯರ್ ನ ಜೊತೆ ಜಂಕ್ಷನ್ ಗಳನ್ನು ಪರಿಶೀಲಿಸಿದ್ದೇವೆ‌. ಮುಖ್ಯ ಯೋಜನೆಯನ್ನು ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಈಗ ತಾತ್ಕಾಲಿಕವಾಗಿ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡಲು ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು

ಈ ಸಂದರ್ಭದಲ್ಲಿ ಉಡುಪಿ ನಗರ ಠಾಣಾಧಿಕಾರಿ ಪ್ರಮೋದ್ ಕುಮಾರ್, ಟ್ರಾಫಿಕ್ ಠಾಣಾಧಿಕಾರಿ ಅಬ್ದುಲ್ ಖಾದರ್,‌ನಗರಸಭೆ ಆಯುಕ್ತ ಉದಯ್, ನಗರಸಭೆ ಅಧಿಕಾರಿ ಯಶವಂತ್, ಹೆದ್ದಾರಿ ಇಂಜಿನಿಯರ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!