DC vs KKR ಹೈವೋಲ್ಟೇಜ್ ಮ್ಯಾಚ್: ಟಾಸ್ ಗೆದ್ದ KKR ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಐಪಿಎಲ್ 2024ರ 16ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ವಿಶಾಖಪಟ್ಟಣದಲ್ಲಿ ಪಂದ್ಯ ನಡೆಯಲಿದೆ. ಡೆಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಸೋತಿದೆ. ಅವರು ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸಿ ಗೆಲುವಿನ ಹಾದಿಗೆ ಮರಳಿದರು. ಮತ್ತೊಂದೆಡೆ, ಕೋಲ್ಕತ್ತಾ ಇದುವರೆಗೆ ಆಡಿದ ಎರಡೂ ಆರಂಭಿಕ ಪಂದ್ಯಗಳನ್ನು ಗೆದ್ದಿದೆ. ಹೀಗಾಗಿ ಗೆಲುವಿನ ಓಟ ಮುಂದುವರಿಸಲು ಉಭಯ ತಂಡಗಳಿಗೂ ಇಂದಿನ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.

ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!