ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ದೊಡ್ಡ ಶಾಕ್ ಎದುರಾಗಿದೆ. ನಿಯಮಿತ ನಾಯಕ ಹಾರ್ದಿಕ್ ಪಾಂಡ್ಯ ಆರೋಗ್ಯ ಸಮಸ್ಯೆಯಿಂದ ಇಂದಿನ ಪಂದ್ಯದಿಂದ ಹೊರಗುಳಿದಿದ್ದು, ಅವರ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಟಾಸ್ ವೇಳೆ ಮಾತನಾಡಿದ ಸೂರ್ಯಕುಮಾರ್, “ಹಾರ್ದಿಕ್ ಆರೋಗ್ಯವಾಗಿಲ್ಲ. ಅವರು ಇಂದು ಆಡಲು ಫಿಟ್ ಇಲ್ಲ” ಎಂದು ಸ್ಪಷ್ಟಪಡಿಸಿದರು. ಅವರ ಸ್ಥಾನದಲ್ಲಿ ವೇಗದ ಬೌಲರ್ ದೀಪಕ್ ಚಾಹರ್ ಅಂತಿಮ ಹನ್ನೊಂದರಲ್ಲಿ ಅವಕಾಶ ಪಡೆದಿದ್ದಾರೆ.
ಇದನ್ನೂ ಓದಿ:
ಇನ್ನೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ತವರಿನ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.
ಹಾರ್ದಿಕ್ ಪಾಂಡ್ಯ ಅವರ ಗೈರುಹಾಜರಾತಿ ಮುಂಬೈಗೆ ದೊಡ್ಡ ಹಿನ್ನಡೆಯಾದರೂ, ಸೂರ್ಯಕುಮಾರ್ ನಾಯಕತ್ವದಲ್ಲಿ ತಂಡ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರ ಮೇಲೆ ಈಗ ಎಲ್ಲರ ಕಣ್ಣು ನೆಟ್ಟಿದೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಎರಡೂ ತಂಡಗಳು ಗೆಲುವಿನ ಲಯ ಮುಂದುವರಿಸಲು ಕಣಕ್ಕಿಳಿದಿವೆ.



