ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಅನುದಾನ ಕೋರಿ ಪ್ರಧಾನಿ ಮೋದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 1.50 ಲಕ್ಷ ಕೋಟಿ ಅನುದಾನ ಬೆಂಗಳೂರಿನ ಮೂಲಸೌಕರ್ಯಗಳ ಅಭಿವೃದ್ಧಿಗೆ ಅವಶ್ಯವಿದೆ. ಆದ‌ ಕಾರಣಕ್ಕೆ ಸಮರ್ಪಕ ಅನುದಾನ ನೀಡಿ ಎಂದು ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಡಿಸಿಎಂ, ಕೇಂದ್ರ ಸರ್ಕಾರ ನಮ್ಮ ಜೊತೆ ನಿಲ್ಲುವ ವಿಶ್ವಾಸವಿದೆ. ಏಕೆಂದರೆ ಪ್ರಧಾನಿಯವರು ಬೆಂಗಳೂರಿನ ಮಹತ್ವದ ಬಗ್ಗೆ ಮಾತನಾಡಿದ್ದಾರೆ. ಬೆಂಗಳೂರಿನ ಮೂಲಕವೇ ‘ಬ್ರ್ಯಾಂಡ್ ಭಾರತ’ವನ್ನು ಅವರು ಕಟ್ಟಬೇಕಿದೆ. ಈಗ ನಮಗೆ ಅವಕಾಶದ ಬಾಗಿಲು ತೆರೆದಿದೆ ಎನ್ನುವ ವಿಶ್ವಾಸ ಎಂದುಕೊಂಡಿದ್ದೇನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಮಯಾವಕಾಶ ಕಡಿಮೆ ಇದ್ದ ಕಾರಣಕ್ಕೆ ಮನವಿ ಸಲ್ಲಿಸಲಾಯಿತು. ಸುಮಾರು 1.50 ಲಕ್ಷ ಕೋಟಿ ಅನುದಾನ ಬೆಂಗಳೂರಿನ ಮೂಲಸೌಕರ್ಯಗಳ ಅಭಿವೃದ್ಧಿಗೆ ಅವಶ್ಯವಿದೆ. ಆದ‌ ಕಾರಣಕ್ಕೆ ಸಮರ್ಪಕ ಅನುದಾನ ನೀಡಿ ಎಂದು ಮನವಿ ಮಾಡಿದ್ದೇನೆ ಎಂದರು.

ರಿಗೆ ಸಂಗ್ರಹದಲ್ಲಿ ಬೆಂಗಳೂರು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಪ್ರಪಂಚವು ಬೆಂಗಳೂರಿನ ಮೂಲಕ ದೇಶವನ್ನು ನೋಡುತ್ತಿದೆ‌. ಮೂರು ದಿನಗಳ ಹಿಂದೆ ಫಿಲಿಪೈನ್ಸ್ ಅಧ್ಯಕ್ಷರು ಬೆಂಗಳೂರಿಗೆ ಭೇಟಿ ನೀಡಿ, ಇಲ್ಲಿನ ಅನೇಕ ನಾಯಕರ ಜೊತೆ ಮಾತುಕತೆ ನಡೆಸಿದರು. ಇದು ಬೆಂಗಳೂರಿನ ಶಕ್ತಿ. ಈ ಕಾರಣಕ್ಕೆ ಈ ನಗರದ ಮತ್ತಷ್ಟು ಅಭಿವೃದ್ಧಿಗೆ ಅನುದಾನ ಬೇಕಿದೆ ಎಂದರು.

ಪ್ರಧಾನಿಗಳಿಗೆ ಡಬಲ್ ಡೆಕ್ಕರ್ ಸೇರಿದಂತೆ ನಮ್ಮ ಅಭಿವೃದ್ಧಿ ಯೋಜನೆಗಳ ಮಾಡೆಲ್ ತೋರಿಸಿದ್ದೇನೆ. ಇದನ್ನು ನೋಡಿ ಅವರು ಸಂತಸಗೊಂಡರು ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!