ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಕಾಂಗ್ರೆಸ್ ನಾಯಕರ ನಡುವೆ ಗುದ್ದಾಟ ಜೋರಾಗಿದೆ. ಸಚಿವ ಜಾರಕಿಹೊಳಿ ತಲೆಎಣಿಕೆ ಅಸ್ತ್ರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಫುಲ್ ಗರಂ ಆಗಿದ್ದಾರೆ.
ಬೆಂಗಳೂರು ವಿಮಾನ ನಿಲ್ದಾಣದ ಬಳಿ ಮಾತನಾಡಿದ ಡಿ.ಕೆ.ಶಿವಕುಮಾರ್, ಯಾರು ಏನೇ ಇದ್ದರೂ ಹೈಕಮಾಂಡ್‌ಗೆ ಭೇಟಿಯಾಗಿ ಹೇಳಲಿ. ಈಗಾಗಲೇ ಹೈಕಮಾಂಡ್ ನಾಯಕರು ಎಲ್ಲರಿಗೂ ಹೇಳಿದ್ದಾರೆ. ನಮ್ರತೆಯಿಂದ ಹೇಳ್ತಿದ್ದೇನೆ. ಇದು ಕಾರ್ಯಕರ್ತರು, ಮತದಾರರ ಪಕ್ಷ. ಯಾರು ಇರಲಿ, ಇಲ್ಲದೇ ಇರಲಿ ಪಕ್ಷ ಉಳಿಯುತ್ತೆ ಎಂದು ತಿಳಿಸಿದ್ದಾರೆ.