ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಶಾಕ್: ಲೋಕಾಯುಕ್ತದಿಂದ ನೊಟೀಸ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಲೋಕಾಯುಕ್ತ ಸಂಸ್ಥೆಯಿಂದ ನೊಟೀಸ್ ನೀಡಲಾಗಿದೆ.

2013ರ ಏಪ್ರಿಲ್ 1ರಿಂದ 2018ರರ ಏಪ್ರಿಲ್ 30ರ ಅವಧಿಯಲ್ಲಿನ ಅಕ್ರಮವಾಗಿ 74.93 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳಿಸಿರುವ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar)​ ವಿರುದ್ಧ ಲೋಕಾಯುಕ್ತ(lokayukta) ದೂರು ದಾಖಲಿಸಿಕೊಂಡಿದ್ದು, ಇದೀಗ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ದಾಖಲೆ ಒದಗಿಸುವಂತೆ ನೊಟೀಸ್ ಜಾರಿ ಮಾಡಿದೆ.

ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆ ರದ್ದು ಮಾಡಿ ರಾಜ್ಯ ಸರ್ಕಾರ, ಲೋಕಾಯುಕ್ತ ತನಿಖೆಗೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್, ಕಳೆದ ಪ್ರೆಬ್ರವರಿ ತಿಂಗಳಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಎಫ್​ಐಆರ್ ದಾಖಲಿಸಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ತಿ ಗಳಿಕೆ ವಿವರ ನೀಡುವಂತೆ ನೊಟೀಸ್ ಜಾರಿ ಮಾಡಿದ್ದು, ಸಿಬಿಐಗೆ ನೀಡಿರುವ ದಾಖಲಾತಿಗಳ ಮಾಹಿತಿಗಳನ್ನು ಒದಗಿಸುವಂತೆ ನೊಟೀಸ್ ​ನಲ್ಲಿ ಸೂಚಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!