ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಡಿಸಿಎಂ ಚರ್ಚೆ ಶುರುವಾಗಿದ್ದು, ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಿಯಾಕ್ಷನ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಮೂರು ಡಿಸಿಎಂಹುದ್ದೆ ಸೃಷ್ಟಿ ಮಾಡಲು ನಾವು ಹೇಳಿಕೊಟ್ಟಿಲ್ಲ. ಕಾಂಗ್ರೆಸ್ ನಾಯಕರೇ ಮಾಡಿಕೊಂಡಿರುವ ಪ್ಲಾನ್ ಇದು ಎಂದುತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ 20 ಕ್ಷೇತ್ರ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ನವರು ಇದ್ದರು.ಆದರೆ ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ನವರೇ ದಿಕ್ಕಾಪಾಲಾಗಿ ಹೋಗುತ್ತಿದ್ದಾರೆ. ಹಾಗಾಗಿ ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕು ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸೊಕ್ಕು ಮುರಿಯಲು ಕಾಂಗ್ರೆಸ್ ನ ಮಹಾನಾಯಕರೆಲ್ಲ ಸೇರಿಕೊಂಡು ಮೂರು ಡಿಸಿಎಂ ಹುದ್ದೆ ಸೃಷ್ಟಿಗೆ ಮಾಡಿಕೊಂಡಿರುವ ಪ್ಲಾನ್ ಇದು. ಕಾಂಗ್ರೆಸ್ ನಾಯಕರ ಈ ಪ್ರಯತ್ನ ಯಶಸ್ವಿಯಾಗಲಿ ಎಂದು ನಾವೂ ಬಯಸುತ್ತೇವೆ ಎಂದು ಟಾಂಗ್ ನೀಡಿದರು.