ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಸಿಎಂ ಡಿ.ಕೆ ಶಿವಕುಮಾರ್ ತಮ್ಮ ಕುಟುಂಬದ ಜೊತೆ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರ (ಇಂದು) ಮಧ್ಯರಾತ್ರಿಯಿಂದಲೇ ಡಿಕೆಶಿ ಅವರು 7 ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಲಿದ್ದಾರೆ.
ಡಿ.ಕೆ ಶಿವಕುಮಾರ್ ಅವರೊಂದಿಗೆ ಪತ್ನಿ ಉಷಾ, ಪುತ್ರಿಯರಾದ ಐಶ್ವರ್ಯ, ಆಭರಣ, ಪುತ್ರ ಆಕಾಶ್ ಅಳಿಯ ಅಮರ್ತ್ಯ ಸುಬ್ರಹ್ಮಣ್ಯ ಹೆಗ್ಡೆ ತೆರಳುತ್ತಿದ್ದಾರೆ.
ಪ್ರವಾಸದ ವೇಳೆ ಅಮೇರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿರೋ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಹಾಗೂ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಭೇಟಿಗೆ ಡಿಸಿಎಂ ಕಚೇರಿ ಸಮಯ ಕೇಳಿದೆ. ಇದುವರೆಗೂ ಭೇಟಿ ಬಗ್ಗೆ ಖಚಿತವಾಗಿಲ್ಲ. ಖಾಸಗಿ ಕಾರ್ಯಕ್ರಮಗಳ ನಡುವೆ ಭೇಟಿಗೆ ಅವಕಾಶ ಸಿಕ್ಕರೆ ಇಬ್ಬರನ್ನೂ ಭೇಟಿ ಮಾಡುವ ಸಾಧ್ಯತೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಈ ಮಧ್ಯೆ ಡಿ.ಕೆ ಶಿವಕುಮಾರ್ ಅವರಿಗೆ ಕಮಲಾ ಹ್ಯಾರಿಸ್ ಅವರಿಂದ ವಿಶೇಷ ಆಹ್ವಾನ ಬಂದಿದೆ ಎಂಬ ಮಾತುಗಳು ಕೇಳಿಬಂದಿವೆ. ಆದ್ರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.