September 10, 2026
Thursday, September 10, 2026
spot_img

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿಕೆ ಶಿವಕುಮಾರ್​​ ವಿರೋಧ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರಕಾರದ ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಜಂಟಿ ಸಂಸದೀಯ ಅಧ್ಯಯನ ಸಮಿತಿಯು ಶನಿವಾರ ಆಯೋಜಿಸಿದ್ದ ಒಂದು ರಾಷ್ಟ್ರ ಒಂದು ಚುನಾವಣೆ ಕುರಿತ ಸಂವಾದದಲ್ಲಿ ಮಾತನಾಡಿದ ಅವರು, ಇದು ರಾಜಕೀಯ ಪ್ರೇರಿತ ಯೋಜನೆಯಾಗಿದ್ದು, ಇದರಿಂದ ರಾಜ್ಯಗಳನ್ನು ದುರ್ಬಳಗೊಳಿಸಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಇದು ಧಕ್ಕೆ ತರುವ ಯೋಜನೆ. ಹೀಗಾಗಿ ಈ ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷನಾಗಿ ಹಾಗೂ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ತಿರಸ್ಕರಿಸುತ್ತೇನೆ ಎಂದು ಹೇಳಿದರು.

ಈ ಯೋಜನೆ ವಿರೋಧಿಸಿ ಈಗಾಗಲೇ ಕರ್ನಾಟಕ ವಿಧಾನಸಭೆಯು ನಿರ್ಣಯವನ್ನೂ ಅಂಗೀಕರಿಸಿದೆ. ಇದು ಪ್ರಾದೇಶಿಕ ಪಕ್ಷಗಳು ಹಾಗೂ ಎದುರಾಳಿ ಪಕ್ಷಗಳ ಧ್ವನಿ ಅಡಗಿಸುವ ಹುನ್ನಾರವಾಗಿದೆ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !