ಹೊಸದಿಗಂತ ಡಿಜಿಟಲ್ ಡೆಸ್ಕ್;
ಡಿಸಿಎಂ ಡಿಕೆ ಶಿವಕುಮಾರ್ ಅವರ ನಡೆ ತೀವ್ರ ಕುತೂಹಲ ಕೆರಳಿಸಿದೆ. ದಿಢೀರ್ ಬೆಳವಣಿಗೆಯೊಂದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರದತ್ತ ಹೊರಟಿದ್ದಾರೆ.
ಧಾರವಾಡದ ಶಾಸಕ ವಿನಯ್ ಕುಲಕರ್ಣಿ ಮತ್ತು ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಲು ಡಿಕೆಶಿ ದಿಢೀರ್ ಹೊರಟ್ಟಿದ್ದಾರೆ.
.ಈಗಾಗಲೇ ಡಿಕೆಶಿ ಬಣದ ಕೆಲ ಶಾಸಕರು ದೆಹಲಿಗೆ ತೆರಳಿದ್ದಾರೆ. ಸಿದ್ದರಾಮಯ್ಯ ಬಣದ ಶಾಸಕರು ಬೆಂಗಳೂರಿನಲ್ಲಿ ಡಿನ್ನರ್ ಸಭೆ ನಡೆಸಿದ್ದಾರೆ.
ಈ ಹಿಂದೆಯೇ ನವೆಂಬರ್ ಕ್ರಾಂತಿ ಆಗಲಿದೆ ಎಂಬ ಸುದ್ದಿ ಬಂದಿತ್ತು. ಆದರೆ ಈಗ ನವೆಂಬರ್ ಕ್ರಾಂತಿ ಆರಂಭವಾಗಿದ್ದು ನಂಬರ್ ಕ್ರಾಂತಿ ಆಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಒಂದು ವೇಳೆ ಅಧಿಕಾರ ಹಂಚಿಕೆ ವಿಚಾರ ಬಂದರೆ ಎರಡು ಬಣದಲ್ಲಿ ಎಷ್ಟು ಜನ ಶಾಸಕರಿದ್ದಾರೆ ಎನ್ನುವುದು ಮುಖ್ಯವಾಗುತ್ತದೆ. ಈ ವಿಚಾರದ ಬಗ್ಗೆ ಮಾತನಾಡಲು ಡಿಕೆಶಿ ಇಬ್ಬರು ಶಾಸಕರ ಜೊತೆ ಮಾತನಾಡಲು ತೆರಳಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.

