July 21, 2026
Tuesday, July 21, 2026
spot_img

ಸಂದರ್ಭ ಬಂದಾಗ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ: ಸಚಿವ ಚಲುವರಾಯಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಹಿಂದುತ್ವ ದೇಗುಲಗಳ ಬಗ್ಗೆ ಬಿಜೆಪಿಗಿಂತ ನಮಗೆ ಹೆಚ್ಚು ಗೌರವವಿದೆ. ನಾವು ಎಲ್ಲರನ್ನೂ ಸಮಾನವಾಗಿ ನೋಡುತ್ತೇವೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಆರ್ ಎಸ್ ಎಸ್ ಗೀತೆ ಹಾಡಿದ ವಿಚಾರವಾಗಿ ಮಂಡ್ಯದಲ್ಲಿ ಹೇಳಿಕೆ ನೀಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಸಂದರ್ಭ ಬಂದಾಗ ಸಿಎಂ ಆಗುತ್ತಾರೆ ಎಂದು ತಿಳಿಸಿದರು.

ಬಿಜೆಪಿಯವರು ಹಿಂದುತ್ವದಲ್ಲಿ ರಾಜಕಾರಣ ಮಾಡುತ್ತಾರೆ. ನಾವು ಧರ್ಮ ಸಮುದಾಯ ಇಟ್ಟುಕೊಂಡು ರಾಜಕಾರಣ ಮಾಡಲ್ಲ. ಡಿಕೆ ಶಿವಕುಮಾರ್ ಬಿಜೆಪಿಗೆ ಹೋಗುವುದಾದರೆ ಯಾವಾಗಲೂ ಹೋಗುತ್ತಿದ್ದರು ಕಾಂಗ್ರೆಸ್ ನಲ್ಲಿ ಡಿಕೆ ಶಿವಕುಮಾರ್ ದಟ್ಟಿ ನೆಲ ಕಂಡುಕೊಂಡಿದ್ದಾರೆ ಎಂದರು.

ನಮಗೆ ಡಿಕೆ ಶಿವಕುಮಾರ್ ಅವರ ಬಗ್ಗೆ ಪ್ರಶಂಸೆ ಇದೆ ಎಂದರು. ಹಾಗಿದ್ರೆ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರಾ ಎಂಬ ಮಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸಂದರ್ಭ ಬಂದಾಗ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಆಗುತ್ತಾರೆ ಎಂದು ಮಂಡ್ಯದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿಕೆ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !