ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಕಾರು ಅಪಘಾತಕ್ಕೀಡಾಗಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಹಿರಿಯ ಕೆಎಎಸ್ ಅಧಿಕಾರಿ ರಾಜೇಂದ್ರ ಪ್ರಸಾದ್ ಅವರು ಸವದತ್ತಿ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ವಾಪಸ್ ಆಗೋವಾಗ ಈ ದುರ್ಘಟನೆ ಸಂಭವಿಸಿದೆ.
ಕಾರು ಗುದ್ದಿದ ರಭಸಕ್ಕೆ ಸವದತ್ತಿ ಪಟ್ಟಣದ ನಿವಾಸಿ ಮಂಜುನಾಥ್ ಬೈರ್ನಟ್ಟಿ ಸಾವನ್ನಪ್ಪಿದ್ದಾನೆ.
ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಕಾರು ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಕಾರು ಗುದ್ದಿದ ರಭಸಕ್ಕೆ ಬೈಕ್ ಸವಾರ ಮಂಜುನಾಥ್ ತಲೆ ಭಾಗಕ್ಕೆ ಗಂಭೀರಗಾಯ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಕ್ಕರೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಮೃತ ಮಂಜುನಾಥ್ ಕೆಲಸಕ್ಕೆ ಹೋಗುವ ವೇಳೆ ಅಪಘಾತ ಸಂಭವಿಸಿ ದುರಂತ ಅಂತ್ಯ ಕಂಡಿದ್ದಾರೆ. ಇನ್ನು, ಅಪಘಾತದ ರಭಸಕ್ಕೆ ರಾಜೇಂದ್ರ ಪ್ರಸಾದ್ ಅವರ ಕಾರು ಕೂಡ ಪಲ್ಟಿಯಾಗಿದ್ದು, ಅಪಘಾತದಲ್ಲಿ ಗಾಯಗೊಂಡ ಹಿರಿಯ ಅಧಿಕಾರಿ ರಾಜೇಂದ್ರ ಪ್ರಸಾದ್ ಮತ್ತು ಕಾರು ಚಾಲಕನನ್ನ ಧಾರವಾಡ ಶಿಫ್ಟ್ ಮಾಡಿ ಆಸ್ಪತ್ತೆ ದಾಖಲಿಸಲಾಗಿದೆ.

