Tuesday, February 27, 2024

ಡಿಸಿಎಂ ಡಿಕೆ ಶಿವಕುಮಾರ್ ಕೇಸ್ ವಿಸ್ಕ್ರತ ಪೀಠಕ್ಕೆ ವರ್ಗಾಯಿಸಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಹೈಕೋರ್ಟ್ ವಿಸ್ಕ್ರತ ಪೀಠಕ್ಕೆ ವರ್ಗಾಯಿಸಿದೆ.

ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೇ ವೇಳೆ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಅರ್ಜಿ ಸಲ್ಲಿಸಿದ್ದರು.

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದನ್ನು ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರನ್ನೊಳಗೊಂಡ ಏಕ ಪೀಠದಲ್ಲಿ ನಡೆಸಲಾಯಿತು.ಈ ವಾದ ವಿವಾದ ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಇಂದೊಂದು ಗಂಭೀರ ಪ್ರಕರಣವಾಗಿದ್ದು, ಡಿಕೆಶಿ ಪ್ರಕರಣವನ್ನು ವಿಸ್ತೃತ ನ್ಯಾಯಪೀಠದಲ್ಲಿ ವಿಚಾರಣೆ ನಡೆಸೋದಕ್ಕೆ ವರ್ಗಾವಣೆ ಮಾಡಿ ಆದೇಶಿಸಿದೆ. ಹಾಗೂ ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್ ಜಾರಿಗೊಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!