ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಇಂದಿನಿಂದ ಜನಸ್ಪಂದನ ಕಾರ್ಯಕ್ರಮ ಆರಂಭವಾಗಿದೆ.
ಸುಮಾರು 10 ದಿನ ನಡೆಯುವ ಈ ಕಾರ್ಯಕ್ರಮದಲ್ಲಿ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಜನರ ಸಮಸ್ಯೆಯನ್ನು ಆಲಿಸಿ ಅದಕ್ಕೆ ಪರಿಹಾರ ನೀಡಲಿದ್ದಾರೆ.
ಒಂದೇ ಸೂರಿನಲ್ಲಿ ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬೆಸ್ಕಾಂ, ಬಿಎಂಆರ್‌ಸಿಎಲ್, ಬಿಎಂಆರ್‌ಡಿಎ, ಸಾರಿಗೆ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಐಟಿಐ ಕ್ರೀಡಾಂಗಣದಲ್ಲಿ ಕೆ.ಆರ್.ಪುರ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರದ ಸಮಸ್ಯೆಗಳನ್ನು ಆಲಿಸಲಾಗುತ್ತದೆ. ದೂರುಗಳನ್ನು ಕೇಳಲು 10 ಕೌಂಟರ್‌ಗಳ ವ್ಯವಸ್ಥೆ ಮಾಡಲಾಗಿದೆ.