ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ನಟಿ ಲೀಲಾವತಿ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಲೀಲಾವತಿ ಅವರು ಪಶು ಆಸ್ಪತ್ರೆಯನ್ನು ನಿರ್ಮಿಸಿದ್ದಾರೆ. ಇದರ ಉದ್ಘಾಟನೆಗೆ ಡಿಕೆಶಿ ಆಗಮಿಸಿದ್ದು, ಮನೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದಾರೆ.
86 ವರ್ಷದ ಲೀಲಾವತಿ ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ ಎಂದು ಪುತ್ರ ವಿನೋದ್ ರಾಜ್ ಹೇಳಿದ್ದಾರೆ. ಇತ್ತೀಚೆಗೆ ಹೆಚ್ಚಿನ ಸೆಲೆಬ್ರಿಟಿಗಳು ಲೀಲಾವತಿ ಅವರನ್ನು ನೋಡಲು ಆಗಮಿಸುತ್ತಿದ್ದಾರೆ. ದರ್ಶನ್, ಅರ್ಜುನ್ ಸರ್ಜಾ, ಶಿವರಾಜ್‌ಕುಮಾರ್, ಅಭಿಷೇಕ್ ಅಂಬರೀಶ್ ಕೂಡ ಲೀಲಾವತಿ ಅವರ ನಿವಾಸಕ್ಕೆ ಬಂದು ಹೋಗಿದ್ದಾರೆ.