ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ರಸ್ತೆಗುಂಡಿಗಳಿಂದ ಸಾಕಷ್ಟು ಅನಾಹುತಗಳು ಸಂಭವಿಸುತ್ತಿದ್ದು, ಈ ಗುಂಡಿಗಳನ್ನು ಮುಚ್ಚೋದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಡೆಡ್‌ಲೈನ್ ನೀಡಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದಾರೆ. ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಬಗೆಹರಿಸಲು ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗುತ್ತಿಗೆದಾರರಿಗೆ ಅಂತಿಮ ಗಡುವು ನೀಡಲಾಗಿದೆ.
ಸ್ವಚ್ಛ ಬೆಂಗಳೂರು ಹಾಗೂ ಸುಗಮ ಸಂಚಾರವೇ ನಮ್ಮ ಗುರಿಯಾಗಿರುವುದರಿಂದ ಆದಷ್ಟು ಬೇಗ ರಸ್ತೆ ಗುಂಡಿಗಳಿಗೆ ಜಿಬಿಎ ಮುಕ್ತಿ ನೀಡಲಿದೆ ಎಂದು ತಿಳಿಸಿದ್ದಾರೆ.