October 8, 2026
Thursday, October 8, 2026
spot_img

ತುಮಕೂರಲ್ಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಿ : ಡಿಸಿಎಂ ಪರಮೇಶ್ವರ್ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ಸಮೀಪ ಎರಡನೇ ವಿಮಾನ ನಿಲ್ದಾಣ ನಿರ್ಮಿಸುವ ಬದಲು ತುಮಕೂರು ಜಿಲ್ಲೆಯ ಶಿರಾದಲ್ಲಿ ಸ್ಥಾಪಿಸಬೇಕು ಎಂಬ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಆಗ್ರಹದ ನಡುವೆ ಕರ್ನಾಟಕದ ಡಿಸಿಎಂ ಪರಮೇಶ್ವರ್​​ ಕೂಡ ಇದೇ ರೀತಿ ಅಭಿಪ್ರಾಯಪಟ್ಟಿದ್ದಾರೆ.

ಅಂತಾರಾಷ್ಟ್ರೀಯ ಏರ್‌ಪೋರ್ಟ್​​ಮನ ತುಮಕೂರಿನಲ್ಲಿ ನಿರ್ಮಿಸಿ ಅಂತಾ 25 ವರ್ಷಗಳಿಂದ ಹೇಳುತ್ತಿದ್ದೇನೆ. ಆ‌ ಮೇಲೆ ಬಿಡಿದಿ ಸೇರಿದಂತೆ ಬೇರೆಬೇರೆ ಜಾಗ ಗುರುತಿಸಿದ್ದಾರೆ. ತುಮಕೂರು 20 ಜಿಲ್ಲೆಗಳ ಹೆಬ್ಬಾಗಿಲು, ನಮಗೂ ಅನುಕೂಲವಾಗುತ್ತೆ ಎಂದಿದ್ದಾರೆ.

ಏರ್‌ಪೋರ್ಟ್‌ಗಾಗಿ ಬೆಂಗಳೂರು ದಕ್ಷಿಣ ಜಿಲ್ಲೆಯ ಮೂರು ಸ್ಥಳಗಳಲ್ಲಿ ಸಮೀಕ್ಷೆ ನಡೆಸಿ ಒಂದು ಜಾಗವನ್ನು ಅಂತಿಮಗೊಳಿಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದರೆ, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಭೂಮಿ ಬಿಟ್ಟುಕೊಡಲು ರೈತರ ವಿರೋಧ ಹೆಚ್ಚಿದೆ.

ಜೊತೆಗೆ ಬೆಂಗಳೂರು ದಕ್ಷಿಣ ಜಿಲ್ಲೆವಿಮಾನ ನಿಲ್ದಾಣಕ್ಕೆ ಸೂಕ್ತ ಸ್ಥಳವಲ್ಲ, ತುಮಕೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ, ಅದರಿಂದ ರಾಜ್ಯಕ್ಕೆ ಹೆಚ್ಚು ಲಾಭವಾಗಲಿದೆ ಎಂದು ಅಭಿಪ್ರಾಯ ಜೋರಾಗುತ್ತಿದೆ. ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್‌, ಕೇಂದ್ರ ಸಚಿವ ವಿ.ಸೋಮಣ್ಣ, ವಸಂತನರಾಸಪುರ ಕೈಗಾರಿಕಾ ಪ್ರದೇಶ ಕೈಗಾರಿಕೆಗಳ ಒಕ್ಕೂಟದ ಅಧ್ಯಕ್ಷ ಡಾ. ಸಿ.ವಿ. ಹರೀಶ್‌ ಸೇರಿದಂತೆ ಹಲವರು ಶಿರಾವನ್ನು ಎರಡನೇ ವಿಮಾನ ನಿಲ್ದಾಣಕ್ಕೆ ಸೂಕ್ತ ಸ್ಥಳವೆಂದು ಪ್ರತಿಪಾದಿಸಿದ್ದಾರೆ.

Must Read