October 27, 2026
Tuesday, October 27, 2026
spot_img

ಡಿಸಿಎಂ ಪರಮೇಶ್ವರ್‌ ಆರೋಗ್ಯದಲ್ಲಿ ದಿಢೀರ್ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಮೂಲಗಳ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಸತತ ಕೆಲಸದ ಒತ್ತಡ ಹಾಗೂ ನಿರಂತರ ಜಿಲ್ಲಾ ಪ್ರವಾಸಗಳ ಓಡಾಟದಿಂದಾಗಿ ಅವರು ತೀವ್ರ ಆಯಾಸಗೊಂಡಿದ್ದರು. ಪರಿಣಾಮವಾಗಿ ಇಂದು ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸದ್ಯ ಆಸ್ಪತ್ರೆಯ ನುರಿತ ವೈದ್ಯರ ತಂಡವು ಅವರಿಗೆ ಸೂಕ್ತ ವೈದ್ಯಕೀಯ ತಪಾಸಣೆ ನಡೆಸಿ, ಚಿಕಿತ್ಸೆ ನೀಡುತ್ತಿದೆ.

ಆಸ್ಪತ್ರೆಗೆ ಧಾವಿಸಿ ಆರೋಗ್ಯ ವಿಚಾರಿಸಿದ ಸಿಎಂ

ಡಿಸಿಎಂ ಪರಮೇಶ್ವರ್ ಅವರು ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಷಣವೇ ಆಸ್ಪತ್ರೆಗೆ ಧಾವಿಸಿದ್ದಾರೆ. ವೈದ್ಯರನ್ನು ಭೇಟಿಯಾಗಿ ಅವರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ ಎನ್ನಲಾಗುತ್ತಿದೆ.

Must Read