ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಹೃದಯಭಾಗದಲ್ಲಿರುವ ಕಬ್ಬನ್ ಪಾರ್ಕ್ನಲ್ಲಿ ಹಸಿರು ಹೆಚ್ಚಿಸುವುದು ಮತ್ತು ಒಟ್ಟಾರೆ ಪುನಶ್ಚೇತನಕ್ಕೆ 5 ಕೋಟಿ ರೂ. ಅನುದಾನ ನೀಡುವುದಾಗಿ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾನ ನೀಡಿದ್ದಾರೆ.
ಕಬ್ಬನ್ ಪಾರ್ಕ್ ಮತ್ತು ಲಾಲ್‌ಬಾಗ್ ಅನ್ನು ‘ಬೆಂಗಳೂರಿನ ಅವಳಿ ಶ್ವಾಸಕೋಶಗಳು’ ಎಂದು ಬಣ್ಣಿಸಿದ್ದಾರೆ. ಅಲ್ಲದೆ, ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಅನುದಾನ ನೀಡಲಾಗುವುದು ಎಂದಿದ್ದಾರೆ.
ಕಬ್ಬನ್ ಪಾರ್ಕ್ ವ್ಯಾಪ್ತಿಯಲ್ಲಿ ಯಾವುದೇ ಹೊಸ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಡಿಕೆಶಿ ಭರವಸೆ ನೀಡಿದ್ದಾರೆ. ಕಬ್ಬನ್ ಪಾರ್ಕ್ ಬಗ್ಗೆ ಜನರು ಹೆಚ್ಚಿನ ಕಾಳಜಿ ವಹಿಸಬೇಕು. ಅಧಿಕಾರಿಗಳು ಈ ಸ್ಥಳವನ್ನು ಸಂರಕ್ಷಿಸಲು ಬಿಡಿಎ ಮತ್ತು ತೋಟಗಾರಿಕೆ ಇಲಾಖೆ ಹಣವನ್ನು ಒದಗಿಸಲು ಸಿದ್ಧವಾಗಿದೆ ಎಂದು ಶಿವಕುಮಾರ್ ಹೇಳಿದ್ದರೆ.
ಉದ್ಯಾನವನದ ನೈಸರ್ಗಿಕ ಮೋಡಿಗೆ ಧಕ್ಕೆಯಾಗದಂತೆ ಅಭಿವೃದ್ಧಿ ಮಾಡಲಾಗುವುದು. ಕಬ್ಬನ್ ಪಾರ್ಕ್ ಅನ್ನು ಸಮುದಾಯ ಸ್ಥಳವನ್ನಾಗಿ ಮಾಡುವ ಆಶಯದೊಂದಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಓಪನ್ ಗ್ರೌಂಡ್ ಕಾರ್ಯಕ್ರಮಗಳನ್ನು ಪರಿಚಯಿಸುವ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ತಿಳಿಸಿದ್ದಾರೆ.

