ಉಗ್ರರನ್ನು ಸದೆಬಡೆಯಲು ಕೇಂದ್ರಕ್ಕೆ ಸಾಥ್‌, ರಾಜಕೀಯ ಮಾಡೋದಿಲ್ಲ ಎಂದ ಡಿಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು. ಈ ವಿಷಯದಲ್ಲಿ ಯಾವ ರಾಜಕೀಯ ಕೂಡ ಮಾಡೋದಿಲ್ಲ. ಕೇಂದ್ರಕ್ಕೆ ಸಾಥ್‌ ನೀಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಜಾಗೃತವಾಗಿ ಕೆಲಸ ಮಾಡಬೇಕಿದೆ. ಮುಖ್ಯಮಂತ್ರಿಗಳು ಈ ವಿಚಾರ ತಿಳಿದ ಕೂಡಲೇ ತಕ್ಷಣವೇ ರಾಜ್ಯ ಸರ್ಕಾರದ ಪರವಾಗಿ ಸಚಿವ ಸಂತೋಷ ಲಾಡ್ ಅವರ ಮುಖಂಡತ್ವದಲ್ಲಿ ಒಂದು ತಂಡವನ್ನು ಕಳುಹಿಸಿದ್ದಾರೆ ಎಂದು ತಿಳಿಸಿದರು.

ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷ ಕೇಂದ್ರ ಸರ್ಕಾರದ ಪರ ನಿಲ್ಲುವುದಾಗಿ ತಿಳಿಸಿದೆ. ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ ಇವುಗಳನ್ನು ಬುಡಸಮೇತ ಕಿತ್ತೊಗೆಯಬೇಕು. ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಹೇಳಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!