ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಡಿನ್ನರ್ ಪಾಲಿಟಿಕ್ಸ್ ತಾರಕಕ್ಕೇರಿರುವ ಸಂದರ್ಭದಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ದೇವರ ಮೊರೆ ಹೋಗಿದ್ದಾರೆ.
ತಮಿಳುನಾಡಿನ ಕುಂಬಕೋಣಂಗೆ ಭೇಟಿ ನೀಡಿ, ಶಕ್ತಿ ಸ್ವರೂಪಿಣಿ ಎಂದೇ ಹೆಸರಾಗಿರುವ ಪ್ರತ್ಯಂಗಿರಾ ದೇವಿ ದರ್ಶನ ಪಡೆದಿದ್ದಾರೆ.
ಡಿಕೆಶಿ ಅವರ ಈ ಭೇಟಿಯು ಭಾರೀ ಚರ್ಚೆಗೆ ಕಾರಣವಾಗಿದೆ. ರಾಜಕೀಯ ಸಮಸ್ಯೆ ಪರಿಹಾರಕ್ಕಾಗಿ ದೇವಿ ದರ್ಶನ ಪಡೆದರೇ ಎಂಬ ಪ್ರಶ್ನೆಯೂ ಮೂಡಿದೆ.