ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿ ಮುಚ್ಚಲು ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ದ ಡೆಡ್ ಲೈನ್ ಮುಗಿದ ಕಾರಣ ಭಾನುವಾರ ತಡರಾತ್ರಿ ಬೆಂಗಳೂರಿನ ರಸ್ತೆ ಕಾಮಗಾರಿ ವೀಕ್ಷಣೆ ನಡೆಸಿದರು.
ಇದರಿಂದಾಗಿ ಏಕಾಏಕಿ ಅಧಿಕಾರಿಗಳು ಗಡಿಬಿಡಿಗೊಂಡಿದ್ದರು. ಸದಾಶಿವನಗರದ ತಮ್ಮ ನಿವಾಸದಿಂದ ಡಿಸಿಎಂ ನಗರ ಪ್ರದಕ್ಷಿಣೆಗೆ ಮಾಡಿ, ಹಲವೆಡೆ ರಸ್ತೆ ಪರಿಶೀಲನೆ ನಡೆಸಿದರು. ಡಿಸಿಎಂಗೆ ಶಾಸಕ ಹ್ಯಾರೀಸ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸಾಥ್ ನೀಡಿದರು.
ಸಿಲಿಕಾನ್ ಸಿಟಿ, ಟೆಕ್ ಹಬ್ ಎಂದೆಲ್ಲ ಖ್ಯಾತಿ ಗಳಿಸಿದ ಬೆಂಗಳೂರು ಗುಂಡಿಗಳ ರಾಜಧಾನಿ ಎಂಬ ಕುಖ್ಯಾತಿಗೆ ಪಾತ್ರವಾಗಿತ್ತು. ರಸ್ತೆ ಗುಂಡಿಗಳ ಬಗ್ಗೆ ʻಪಬ್ಲಿಕ್ ಟಿವಿʼ ನಿರಂತರ ವರದಿ ಪ್ರಸಾರ ಮಾಡಿತ್ತು. ಇದಕ್ಕೆ ಸ್ಪಂದಿಸಿದ್ದ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್, ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿಗೆ ಗಡುವು ನೀಡಿದರು. ಗಡುವು ಮುಕ್ತಾಯಗೊಂಡ ಹಿನ್ನೆಲೆ ಖುದ್ದು ರಸ್ತೆಗಿಳಿದು ಪರಿಶೀಲನೆ ನಡೆಸಿದರು.
ಬೆಂಗಳೂರು ನಗರದ ಜೆಸಿ ರಸ್ತೆ, ಟ್ರಿನಿಟಿ ಜಂಕ್ಷನ್ ಹಾಗೂ ದೊಮ್ಮಲೂರು ಬ್ರಿಡ್ಜ್ ಬಳಿ ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿಯ ಸ್ಥಿತಿಗತಿಗಳನ್ನು ಪರಿಶೀಲಿಸಿದೆ. ಅಧಿಕಾರಿಗಳು ನೀಡಿದ ಮಾಹಿತಿ ಕೇಳಿ ಕೂರುವವನು ನಾನಲ್ಲ. ಕಾಮಗಾರಿಯ ಗುಣಮಟ್ಟವನ್ನು ಕಣ್ಣಾರೆ ನೋಡಿ ಪರಿಶೀಲಿಸುವುದು ಈ ಭೇಟಿಯ ಉದ್ದೇಶವಾಗಿದೆ. ಜಾಗತಿಕ ನಗರವಾಗಿ ಗುರುತಿಸಿಕೊಂಡಿರುವ… pic.twitter.com/AMAT7mcuFS
— DK Shivakumar (@DKShivakumar) September 23, 2024