ಹೊಸದಿಗಂತ ವರದಿ ತುಮಕೂರು:
ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿರುವ ಎಚ್ ಎ ಎಲ್ ಹೆಲಿಕಾಪ್ಟರ್ ತಯಾರಿಕಾ ಕೇಂದ್ರಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಶುಕ್ರವಾರ ಭೇಟಿ ನೀಡಿದರು. ನಂತರ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವೀಕ್ಷಣೆ ಮಾಡಿದರು.

ದೆಹಲಿಯಲ್ಲಿ ಕರ್ನಾಟಕ ಸರಕಾರದ ವಿಶೇಷ ಪ್ರತಿನಿಧಿ, ಮಾಜಿ ಸಚಿವ ಟಿ ಬಿ ಜಯಚಂದ್ರ, ಶಾಸಕರಾದ ಗುಬ್ಬಿ ಶ್ರೀನಿವಾಸ್, ಡಾ. ರಂಗನಾಥ್, ಡಿಸಿಎಂ ತಾಂತ್ರಿಕ ಸಲಹೆಗಾರ ಜೈಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.