ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇವರಲ್ಲಿ ಅಪಾರ ಭಕ್ತಿ, ನಂಬಿಕೆ ಹೊಂದಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಇಂದು ಬೆಳ್ಳಂಬೆಳಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಧರ್ಮಸ್ಥಳದಲ್ಲಿ ಒಂದು ಸುತ್ತು ದೇವಸ್ಥಾನ ಪ್ರದಕ್ಷಿಣೆ ಹಾಕಿ, ಮಂಜುನಾಥಸ್ವಾಮಿಯ ದರುಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ಮಂಜುನಾಥ ಸ್ವಾಮಿ ದರುಶನದ ಬಳಿಕ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರನ್ನ ಡಿಸಿಎಂ ಡಿಕೆಶಿ ಭೇಟಿಯಾಗಿದ್ದಾರೆ. ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.