ಹೊಸ ದಿಗಂತ ಡಿಜಿಟಲ್ ಡೆಸ್ಕ್:
‘ಬೆಂಗಳೂರು ನಡಿಗೆ’ ಕಾರ್ಯಕ್ರಮದ ಪ್ರಯುಕ್ತ ನಗರದ ಜೆ.ಪಿ ಉದ್ಯಾನದಲ್ಲಿ ಸಾರ್ವಜನಿಕರ ಜೊತೆ ಭಾನುವಾರ ಮುಂಜಾನೆ ಹೆಜ್ಜೆ ಹಾಕಿದ ಡಿಸಿಎಂ ಅವರು ಜನರ ಅಹವಾಲುಗಳನ್ನು ಆಲಿಸಿದರು.
ಈ ವೇಳೆ ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ ಅವರ ಪುತ್ಥಳಿ ಮರು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಉದ್ಯಾನದ ಸೌಂದರ್ಯೀಕರಣ, ಈಜುಕೊಳ, ಯೋಗಶಾಲೆ, ಜಿಮ್ ಹಾಗೂ ಮಕ್ಕಳ ಆಟದ ಮೈದಾನ, ಟಾಯ್ ಟ್ರೈನ್ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದರು.
ಪಾಲಿಕೆ ಆಯುಕ್ತರು ಹಾಗೂ ಜೆ.ಪಿ.ಪಾರ್ಕ್ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳಿಂದ ಉದ್ಯಾನದಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. ಟಾಯ್ ಟ್ರೈನ್, ಮಕ್ಕಳ ಆಟಿಕೆಗಳು ಸೇರಿದಂತೆ ಮೂಲಸೌಕರ್ಯಗಳ ಕೊರತೆ ಏಕೆ ಉಂಟಾಗಿದೆ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.
ಪ್ರತಿದಿನವೂ ಎಲ್ಲಾ ಶೌಚಾಲಯಗಳಿಗೂ ಬೀಗ ಹಾಕಲಾಗಿರುತ್ತದೆ ಎನ್ನುವ ದೂರಿಗೆ, ಇನ್ನೆರಡು ದಿನದಲ್ಲಿ ಈ ಸಮಸ್ಯೆ ಬಗೆಹರಿಯಲೇ ಬೇಕುಎಂದು ನಗರ ಪಾಲಿಕೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರಿಗೆ ಸೂಚನೆ ನೀಡಿದರು.
ಮಹಿಳಾ ನಡಿಗೆದಾರರು ನಮಗೆ ಪ್ರತ್ಯೇಕ ವಿಶ್ರಾಂತಿ ಕುಟೀರ ಬೇಕಾಗಿದೆ. ಹಳೆಯ ಜಾಗ ಸುಸ್ಥಿತಿಯಲ್ಲಿದೆ ಎಂದು ದೂರಿದರು. ಉದ್ಯಾನದಲ್ಲಿನ ಕೆರೆಗೆ ಈ ಮೊದಲು ಮಳೆ ನೀರು ಹರಿಯುತ್ತಿತ್ತು. ಈಗ ಬರುತ್ತಿಲ್ಲ ಎಂದು ನಾಗರಿಕರೊಬ್ಬರು ದೂರಿದಾಗ,ಹಾಗಾದರೆ ಕಾಲುವೆಯನ್ನು ಮುಚ್ಚಲಾಗಿದೆ. ಅದನ್ನು ಸರಿಪಡೊಸೋಣಎಂದರು.