ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆಂಗೇರಿ ಕೆರೆಯಲ್ಲಿ ಕೊಚ್ಚಿ ಹೋಗಿ ಅಣ್ಣ, ತಂಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ತಂಗಿ ಮಹಾಲಕ್ಷ್ಮಿ ಶವ ಪತ್ತೆಯಾಗಿದೆ.
ಬೆಂಗಳೂರು ನಗರದಲ್ಲಿ ಸುರಿದ ಮಳೆಗೆ ಕೆಂಗೇರಿಯ ಕೆರೆಯ ಬಳಿ ಅಣ್ಣ ತಂಗಿ ಇಬ್ಬರು ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ. ಬೆಳಿಗ್ಗೆ ಅಗ್ನಿಶಾಮಕ ದಳ ಸಿಬ್ಬಂದಿಗಳ ಶೋಧ ಕಾರ್ಯದಿಂದ ಅಣ್ಣನ ಶವ ಸಿಕ್ಕಿದ್ದು ಇದೀಗ ತಂಗೆ ಮಹಾಲಕ್ಷ್ಮಿ ಶವ ಪತ್ತೆಯಾಗಿದೆ.
ಬಾಲಕಿ ಮಹಾಲಕ್ಷ್ಮಿ ಬಿದ್ದಂತಹ ಸ್ಥಳದಿಂದ ಸುಮಾರು 100 ಮೀಟರ್ ದೂರದಲ್ಲಿ ಬಾಲಕಿ ಶವ ಪತ್ತೆಯಾಗಿದೆ. ಮಗಳ ಮೃತದೇಹವನ್ನು ಕಂಡು ತಾಯಿಯ ಆಕ್ರಂದನ ಮುಗಿಲು ಮುಟ್ಟಿತು. ಇಂದು ಬೆಳಿಗ್ಗೆ ಮಹಾಲಕ್ಷ್ಮಿಯ ಅಣ್ಣ ಜಾನ್ ಸೇನಾ ಮೃತದೇಹವನ್ನು ಅಗ್ನಿಶಾಮಕದಳ ಸಿಬ್ಬಂದಿ ಹೊರ ತೆಗೆದಿದ್ದರು.