ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ತಮಿಳುನಾಡಿನ ಪುದುಕೊಟ್ಟೈನಲ್ಲಿ ನಡೆದಿದೆ.
ಬುಧವಾರ ಬೆಳಗ್ಗೆ ತಿರುಚ್ಚಿ-ಕಾರೈಕುಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ನಿಂತಿತ್ತು. ಸಂಜೆಯಾದರೂ ಅದೇ ಸ್ಥಳದಲ್ಲಿ ಕಾರು ನಿಂತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರೀಶಿಲಿಸಿದಾಗ ಕಾರಿನೊಳಗೆ ಐವರು ಮೃತಪಟ್ಟಿರುವುದು ಕಂಡುಬಂದಿದೆ.
ಮೃತರನ್ನು ಉದ್ಯಮಿ ಮಣಿಕಂದನ್ (50), ಅವರ ಪತ್ನಿ ನಿತ್ಯ, ತಾಯಿ ಸರೋಜಾ ಮತ್ತು ಅವರ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಮೃತರು ಸೇಲಂ ನಿವಾಸಿಗಳು ಎಂದು ಗುರುತಿಸಲಾಗಿದೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ವಿಷ ಸೇವಿಸಿರುವ ಶಂಕೆ ವ್ಯಕ್ತವಾಗಿದೆ.
ಇವರೆಲ್ಲರೂ ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.