ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಬಳಿ ಮೂವರು ಯುವಕರ ಮೃತದೇಹ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಬಳಿ ಮೂವರು ಯುವಕರ ಮೃತದೇಹ ಪತ್ತೆಯಾಗಿದೆ.

ಆಂಧ್ರಪ್ರದೇಶ ಮೂಲದ ಶಶಿಕುಮಾರ್‌, ಲೋಕಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು, ಒಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ.

ಆಂಧ್ರಪ್ರದೇಶದ ಚಿತ್ತೂರು ಮೂಲದವರಾದ ಯುವಕರು 25ರ ವಯಸ್ಸಿನ ಯುವಕರಾಗಿದ್ದಾರೆ. ಸಾರ್ವಜನಿಕರು ನೋಡಿ ಕೂಡಲೇ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಮೂವರು ಯುವಕರು ಆತ್ಮಹತ್ಯೆಗೆ ಶರಣಾಗಿದ್ದಾರಾ? ಕೊಲೆಯಾ ಅಥವಾ ಹಳಿ ದಾಟುವ ವೇಳೆ ಮೃತಪಟ್ಟಿದ್ದಾರಾ ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!