Monday, December 11, 2023

Latest Posts

ಮನಸೋ ಇಚ್ಚೆ ಹಲ್ಲೆ ನಡೆಸಿದ ದುಷ್ಕರ್ಮಿಗಳು, ಬೆಂಗಳೂರಿನಲ್ಲಿ ಶವ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಆರ್‌ಎಂಸಿ ಯಾರ್ಡ್ ಎಂ.ಕೆ ಎಂಟರ್ ಪ್ರೈಸಸ್ ಕಟ್ಟಡದ ಹಿಂಭಾಗದಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಮನಸೋ ಇಚ್ಚೆ ಹೊಟ್ಟೆ, ಎದೆಭಾಗ, ಕೈ-ಕಾಲುಗಳ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ.

ಬೇರೆಡೆ ಕೊಲೆ ಮಾಡಿ ಆರ್‌ಎಂಸಿ ಯಾರ್ಡ್ ಹತ್ತಿರ ಶವ ಬಿಸಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!